Ashwaveega News 24×7 ಮಾರ್ಚ್ 13– 2026 : ನವದೆಹಲಿ: ಜಾಗತಿಕ ಆರ್ಥಿಕ ಪರಿಸ್ಥಿತಿಯ ನಡುವೆ ಭಾರತೀಯ ರೂಪಾಯಿ ಮೌಲ್ಯಕ್ಕೆ ಮತ್ತೆ ಹೊಡೆತ ಬಿದ್ದಿದ್ದು, ಅಮೆರಿಕನ್ ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ ದಾಖಲಿಸಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 35 ಪೈಸೆ ಕುಸಿದು 92.36 ಮಟ್ಟಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ರೂಪಾಯಿ ಕನಿಷ್ಠ ಮಟ್ಟವೂ 92.36 ಆಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಇದಕ್ಕೆ ಜೊತೆಗೆ ದೇಶೀಯ ಷೇರು ಮಾರುಕಟ್ಟೆಯಲ್ಲಿನ ಕುಸಿತವೂ ರೂಪಾಯಿ ಮೇಲೆ ಒತ್ತಡ ಹೆಚ್ಚಿಸಿದೆ.
ಇನ್ನೊಂದೆಡೆ ವಿದೇಶಿ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಬಂಡವಾಳ ಹಿಂತೆಗೆದುಕೊಳ್ಳುತ್ತಿರುವುದು ಕೂಡ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಅಮೆರಿಕನ್ ಡಾಲರ್ ಮತ್ತಷ್ಟು ಪ್ರಬಲವಾಗುತ್ತಿರುವುದು ಭಾರತೀಯ ಆರ್ಥಿಕತೆಗೆ ಹೊಸ ಸವಾಲಾಗಿ ಪರಿಣಮಿಸಿದೆ.
