
Ashwaveega News 24×7 ಅಕ್ಟೋಬರ್. 07: ನಾನು ಬುರುಡೆ ಗ್ಯಾಂಗ್ ಜೊತೆ ಸೇರಿ ತಪ್ಪು ಮಾಡಿದ್ದೇನೆ. ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಿದೆ .ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಧರ್ಮಸ್ಥಳದ ಬಗ್ಗೆ ಬುರುಡೆ ಬಿಟ್ಟಿದ್ದ ಸುಜಾತ ಭಟ್ ಕೊನೆಗೂ ತಪ್ಪೋಪ್ಪಿಕೊಂಡಿದ್ದಾರೆ.
ಗೊತ್ತಾಗದೆ ನನ್ನಿಂದ ತಪ್ಪಾಗಿದೆ .ನನ್ನ ಜೀವನದಲ್ಲಿ ಇದೊಂದು ನನಗೆ ಕಪ್ಪು ಚುಕ್ಕೆ ಆಯ್ತು.ಇನ್ನಾದ್ರೂ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ.
ವಾಸಂತಿ ಫೋಟೋಗೆ ನಾನೇ ಬೊಟ್ಟಿಟ್ಟು ತೋರಿಸಿದ್ದೆ. ಇಷ್ಟು ದೊಡ್ಡಮಟ್ಟಕ್ಕೆ ಹೋಗುತ್ತೆ ಅಂತಾ ಗೊತ್ತಿರಲಿಲ್ಲ ಎಂದು ಕೊನೆಗೂ ತಾನು ಮಾಡಿದ ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ .
ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.
ಇನ್ನು ಅನನ್ಯಾ ಭಟ್ ಕೇಸಿನಲ್ಲಿ ತಾನು ತಪ್ಪು ಮಾಡಿದ್ದು ಈ ಬಗ್ಗೆ ಕ್ಷಮೆ ಕೇಳುತ್ತೇನೆ. ನನ್ನ 60 ವರ್ಷದ ಜೀವನದಲ್ಲಿ ಇದೊಂದು ನನಗೆ ಕಪ್ಪು ಚುಕ್ಕಿ, ಇನ್ನಾದರೂ ನನಗೆ ಉತ್ತಮ ಜೀವನ ನಡೆಸುವ ಆಸೆಯಿದೆ, ಧರ್ಮಸ್ಥಳಕ್ಕೆ ಹೋಗಿ ತಪ್ಪು ಕಾಣಿಕೆ ಹಾಕುತ್ತೇನೆ, ಧರ್ಮಸ್ಥಳಕ್ಕೆ ಹೋಗಿ ಕಲ್ಲು ಹೊಡೆಯುತ್ತೇನೆ ಎಂದು ಹೇಳಿದ್ದೇನೆ, ನನ್ನಿಂದ ತಪ್ಪಾಗಿದೆ, ವೀರೇಂದ್ರ ಹೆಗ್ಗಡೆಯವನ್ನು ಭೇಟಿ ಮಾಡಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ನಟನ ಸೋದರನಿಗೂ ನನಗೂ ಯಾವುದೇ ಸಂಬಂಧವಿಲ್ಲ, ನಟನ ಸೋದರನ ಮನೆಯಲ್ಲಿ ವಾಸಂತಿ ಇರಬಹುದು ಎಂಬ ಶಂಕೆ ನನಗಿದೆ. ಅದನ್ನು ಎಸ್ ಐಟಿ ತನಿಖೆ ವೇಳೆ ಹೇಳಿದ್ದೆ, ಅವರು ತನಿಖೆ ಮಾಡಬಹುದು ಎಂದರು.