Ashwaveega News 24×7 ಜನವರಿ 15 – Makar Sankranti 2026 – ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ.
ಗವಿಗಂಗಾಧರೇಶ್ವರ ಸ್ವಾಮಿಯ ಮೇಲೆ ಸೂರ್ಯ ರಶ್ಮಿ ಹಾದುಹೋಗುವ ಅಪರೂಪದ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರಿಗಾಗಿ ದೇವಾಲಯದ ಆಡಳಿತ ಮಂಡಳಿ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ತಳ್ಳಾಟ, ನೂಕಾಟ ತಪ್ಪಿಸಲು ಸರತಿ ಸಾಲು ಹಾಗೂ ದೇವಾಲಯದ ಹೊರಗೆ ಬೃಹತ್ ಪರದೆಯ ವ್ಯವಸ್ಥೆ ಮಾಡಲಾಗುವುದು,ʼ ಎಂದು ಮುಜರಾಯಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
