Ashwaveega News 24×7 ಸೆ. 19: ಮಹತ್ವದ ಬೆಳವಣಿಗೆಯೊಂದರಲ್ಲಿ, ಲೇಖಕಿ ಮತ್ತು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
2025ರ ನಾಡಹಬ್ಬ ಮೈಸೂರು ದಸಾರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವ ಕರ್ನಾಟಕ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
ಆದರೆ ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು.
ಈ ವಿವಾದಕ್ಕೆ ಮೊದಲು ಪ್ರತಾಪ್ ಸಿಂಹ ಅವರು ಹೈಕೋಟ್ರ್ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯಲ್ಲಿ ಬಾನು ಮುಷ್ತಾಕ್ ಅವರು 2023ರಲ್ಲಿ ಒಂದು ಸಾಹಿತ್ಯ ಸಮೇಳನದಲ್ಲಿ ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಲ್ಲದೆ, ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯುವ ಉದ್ಘಾಟನೆಯಲ್ಲಿ ಹಿಂದೂಯೇತರ ವ್ಯಕ್ತಿಯು ಪೂಜೆ ನೆರವೇರಿಸುವುದು ಆಗಮ ಶಾಸ್ತ್ರದ ನಿಯಮಗಳ ವಿರುದ್ಧವಾಗಿದ್ದು, ಹಿಂದೂ ಭಾವನೆಗಳನ್ನು ದೌರ್ಜನ್ಯ ಮಾಡುತ್ತದೆ ಎಂದು ವಾದಿಸಲಾಗಿತ್ತು.
ಮೈಸೂರು ರಾಜವಂಶದ ಪ್ರತಿನಿಧಿಗಳನ್ನು ಸಮಾಲೋಚಿಸದೆ ಆಹ್ವಾನ ನೀಡಿರುವುದು ಸಹ ತಪ್ಪು ಎಂದು ಹೇಳಲಾಗಿತ್ತು. ಅದರೆ ಈ ಅರ್ಜಿ ವಜಾಗೊಂಡಿತ್ತು.
