ನವದೆಹಲಿ : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ DCM ಡಿಕೆಶಿಗೆ ಸುಪ್ರೀಂ ಕೋರ್ಟ್ ಕೊಂಚ ರಿಲೀಫ್ ಕೊಟ್ಟಿದ್ದು, 4 ವಾರ ವಿಚಾರಣೆ ಮುಂದೂಡಿಕೆ ಮಾಡಿದೆ. ಇತ್ತೀಚೆಗೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದ್ದು, ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸದ್ಯ ನಾಲ್ಕು ವಾರಗಳ ಕಾಲ ಮುಂದೂಡಿದೆ.
ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದೆ.