
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ವಿಜಯ್ ದಾಸ್ ಎಂಬ ಆರೋಪಿಯನ್ನು ಬಾಂದ್ರ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆಯಿದೆ.ಆರೋಪಿ ವಿಜಯ್ ದಾಸ್ ಹೋಟೆಲ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು ಕಳೆದ 3 ದಿನಗಳಿಂದ ವಿಜಯ್ ದಾಸ್, ಬಿಜೋಯ್ ದಾಸ್ ,ಮೊಹಮ್ಮದ್ ಇಲ್ಯಾಸ್ ಎಂಬ ಹೆಸರಿನಲ್ಲಿ ಸಂಚಾರಿಸುತ್ತಿದ್ದ ಎನ್ನಲಾಗ್ತಿದೆ.