Ashwaveega News 24×7 ಜನವರಿ 15 – Suttur Jatra Mahotsav 2026 – ಮೈಸೂರು: ದಕ್ಷಿಣ ಕರ್ನಾಟಕದ ಹೆಸರಾಂತ ಸುತ್ತೂರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಇದೇ ಜನವರಿ 15ರಿಂದ 20ರವರೆಗೆ ನೆರವೇರಲಿದೆ. ಮೈಸೂರಿನ ನಂಜನಗೂಡು ಕಪಿಲಾ ನದಿತೀರದಲ್ಲಿರುವ ಸುತ್ತೂರು ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಐತಿಹ್ಯವಿದೆ. ಆರು ದಿನಗಳ ಕಾಲ ಈ ಜಾತ್ರಾ ಮಹೋತ್ಸವ ನಡೆಯಲಿದೆ. ವೈವಿಧ್ಯತೆಗಳಿಂದ ಕೂಡಿರುವ ಸುತ್ತೂರು ಜಾತ್ರೆಯು ಗ್ರಾಮೀಣ ಸೊಗಡಿನ ಅದ್ಧೂರಿ ಹಾಗೂ ಸಂಭ್ರಮದ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.
ಸುತ್ತೂರು ಶ್ರೀಕ್ಷೇತ್ರದಲ್ಲಿ ಅದ್ಧೂರಿ ಜಾತ್ರೆ ಮಹೋತ್ಸವಕ್ಕೆ ಜನವರಿ 15 ರಿಂದ 20 ರವರೆಗೆ ಆರು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ, ಕೃಷಿ ಮೇಳ, ವಸ್ತು ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನವೇ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಗಿದ್ದು, ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು ಭಾಗವಹಿಸಲಿದ್ದಾರೆ.

ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕೇವಲ ಧಾರ್ಮಿಕ ಆಚರಣೆಗಳ ಜೊತೆಗೆ ಆರೋಗ್ಯ ಮೇಳ, ಕೃಷಿ ಮೇಳ, ಸಾಮೂಹಿಕ ವಿವಾಹ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ, ರಂಗೋಲಿ, ಸೋಬಾನೆ ಪದ, ಗಾಳಿಪಟ, ಚಿತ್ರಕಲೆ, ರಾಗಿ ಬೀಸುವ ಸ್ಪರ್ಧೆ, ವಸ್ತುಪ್ರದರ್ಶನ, ಪೌರಾಣಿಕ ನಾಟಕಗಳ ಪ್ರದರ್ಶನ ನಡೆಯಲಿವೆ. ಈ ಜಾತ್ರೆ ಮಹೋತ್ಸವದಲ್ಲಿ ಪ್ರಸಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

