
ಬೆಂಗಳೂರು : ಲಾಡ್ಜ್ ನಲ್ಲಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಸ್ವಾದ ಸಾವನ್ನಪ್ಪಿದ ಘಟನೆ ಜರುಗಿದ್ದು, ಗದಗ್ ಮೂಲದ 56 ವರ್ಷದ ಜಕ್ಕಣ್ಣಗೌಡರ್ ಸಾವನ್ನಪ್ಪಿದ್ದಾರೆ.
ಅ.14 ರಂದು ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಅಧಿಕಾರಿ ಜಕ್ಕಣ್ಣಗೌಡರ ಸಾವನ್ನಪ್ಪಿದ್ದು, ಇವರು ವೈಭವ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ ನೆನ್ನೆ ರಾತ್ರಿ 9ರ ಸುಮಾರಿಗೆ ಅವರು ರೂಮ್ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಒಂದೆಡೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮತ್ತೊಂದೆಡೆ ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.
ಇನ್ನು ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿದ್ದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕೂಡಲೇ ಲಾಡ್ಜ್ ಆಗಮಿಸಿದ್ದಾರೆ. ಹಾಗೇ ಸ್ಥಳಕ್ಕೆ ಇನ್ನು ಉಪ್ಪಾರ ಪೇಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಸಾವಿನ ಸತ್ಯಾಸತ್ಯತೆ ತಿಳಿಯಲಿದೆ.
ಇದನ್ನೂ ಓದಿ : https://ashwaveega.com/in-hassan-district-a-forester-died-after-being-touched-by-electricity/