ಬೆಂಗಳೂರು : ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಇಂದು ನಗರದಲ್ಲಿ ವರದಿಗಾರರರೊಂದಿಗೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 16 ತಿಂಗಳಾಗಿದ್ದು, 16 ಹಗರಣಗಳಲ್ಲಿ ಭಾಗಿಯಾಗಿದೆ. ಇವೆಲ್ಲವುಗಳ ಬಗ್ಗೆ ಚರ್ಚಿಸಲು ಬಿಜೆಪಿ ನಿರ್ಧರಿಸಿದೆ. ಈ ಹಿಂದಿನ ಅಧಿವೇಶನದಲ್ಲಿ ಒಂದು ವಿಕೆಟ್ ಉರುಳಿತ್ತು. ಮುಂಬರುವ ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ.
ಇದರ ಜತೆಗೆ ಸಂಪುಟದ ಇನ್ನಿಬ್ಬರು ಸಚಿವರ ವಿಕೆಟ್ಗಳೂ ಉರುಳಲಿವೆ,” ಎಂದು ಭವಿಷ್ಯ ನುಡಿದಿದ್ದು, ದಿನೇ ದಿನೆ ರಾಜ್ಯ ಸರಕಾರದ ಒಂದೊಂದೇ ಹಗರಣಗಳು ಹೊರಗೆ ಬರುತ್ತಿವೆ. ಈ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ದುರುದ್ದೇಶದಿಂದ ಹಿಂದಿನ ಸರಕಾರದ ಅವಧಿಯ ಅಭಿವೃದ್ಧಿ ಕಾರ್ಯ, ಯೋಜನೆಗಳ ತನಿಖೆ ನಡೆಸುವುದಾಗಿ ಸರಕಾರ ಹೇಳುತ್ತಿದೆ.