Ashwaveega news 24×7ಮಾರ್ಚ್ 27.2026ಬೆಂಗಳೂರು: ವಿದ್ಯಾರ್ಥಿಗಳಿಗೆ ಹಿಂದ ಪಾಸ್ ಕಡ್ಡಾಯ ಮಾಟದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂಧ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು ಪ್ರೊ. ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ (SEP) ಆಯೋಗ ಶಿಫಾರಸು ಮಾಡಿತ್ತು. ಈ ನೀತಿಯು ಮಾತೃಭಾಷೆ/ಕನ್ನಡಕ್ಕೆ ಆದ್ಯತೆ ನೀಡುತ್ತಿದ್ದು, ಹಿಂದಿ ಭಾಷೆಯ ಕಡ್ಡಾಯ ಕಲಿಕೆಯನ್ನು ಕೈಬಿಡುವ ಗುರಿ ಹೊಂದಿತ್ತು.

ಕರವೇ ಶಿವರಾಮೇಗೌಡ, ಸಾರಾ ಗೋವಿಂದ್ ನೇತೃತ್ವದಲ್ಲಿ ಇಂದು ಬೆಂಗಳೂರು ಸದಾಶಿವನಗರದಲ್ಲಿರುವ ಸಚಿವ ಮಧು ಬಂಗಾರಪ್ಪ ಅವರನ್ನ ಭೇಟಿಯಾದ ಕನ್ನಡ ಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಮನವಿ ಮಾಡಿವೆ. ಶಿಕ್ಷಣದಲ್ಲಿ ತ್ರಿಭಾಷ ಸೂತ್ರ ರದ್ದು ಮಾಡಿ, ದ್ವಿಭಾಷಾ ಸೂತ್ರ ಜಾರಿ ಮಾಡುವಂತೆ ಮನವಿ ಮಾಡಿವೆ.
ಕನ್ನಡ ಪರ ಸಂಘಟನೆಗಳ ಮನವಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂದಿ ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.
