Ashwaveega News 24×7 ಅ. 23: ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿಚಾರಣೆಯ ನಂತರ ಬುರುಡೆ ಗ್ಯಾಂಗ್ನ ಬಣ್ಣ ಬಯಲಾಗುತ್ತಿದೆ. ಚಿನ್ನಯ್ಯನ ಬಂಧನಕ್ಕೆ ಸಂಬಂಧಿಸಿದಂತೆ ಇದೇ ಪ್ರಥಮ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಈ ಬಗ್ಗೆ ಹೆಚ್ಚು ಮಾತನಾಡಲ್ಲ, ಎಸ್ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.
ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸೋ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ, ಕ್ಷೇತ್ರದ ಮೇಲಿನ ಜನರ ಭಕ್ತರ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ನಾನು ಆಶಿಸ್ತೇನೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
