Ashwaveega News 24×7 ಡಿಸೆಂಬರ್. 22: ಚಾಮರಾಜನಗರದ ನಂಜೇದೇವನಪುರ ಬಳಿ 5 ಹುಲಿ ಕಾಣಿಸಿಕೊಂಡಿದ್ದು ಸ್ಥಳೀಯರದಲ್ಲಿ ಆತಂಕ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ನಂಜೇದೇವನಪುರ ಸುತ್ತಮುತ್ತಲ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ.
ಹೀಗಾಗಿ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡ್ರೋನ್ನಲ್ಲೂ 5 ಹುಲಿಗಳು ಓಡಾಟ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಸಾಕಾನೆಗಳನ್ನು ಬಳಸಿ ಕೂಂಬಿಂಗ್ ನಡೆಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ತಿದೆ. ಸ್ಥಗಿತಗೊಂಡ ಕಲ್ಲು ಕ್ವಾರಿಗಳನ್ನೇ ಟೈಗರ್ ಆವಾಸ ಸ್ಥಾನ ಮಾಡಿಕೊಂಡಿವೆ.
ಇದು ಹುಲಿ ಸೆರೆ ಕಾರ್ಯಾಚರಣೆಯನ್ನು ಜಟಿಲಗೊಳಿಸಿದೆ. ಇಂದು ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ರು.
ಹುಲಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ್ರು. ನಂತರ ಈ ಮಾಹಿತಿಯನ್ನ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ರು.
