Ashwaveega News 24×7 ಮಾರ್ಚ್ 12 – 2026 : ಚೆನ್ನೈ: ಚುನಾವಣಾ ಕಾವು ಹೆಚ್ಚಿರುವ ತಮಿಳುನಾಡಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಉಂಟಾಗಬಹುದು ಎಂಬ ವದಂತಿ ಜನರಲ್ಲಿ ಆತಂಕ ಸೃಷ್ಟಿಸಿದೆ. ವಾಸ್ತವದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದರೂ, ಭಯದಿಂದ ಜನರು ಪೆಟ್ರೋಲ್ ಬಂಕ್ಗಳ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಾಗಬಹುದು ಎಂಬ ಭೀತಿಯಿಂದ ಸಾರ್ವಜನಿಕರು ಕಳೆದ ರಾತ್ರಿ నుంచೇ ಬಂಕ್ಗಳ ಮುಂದೆ ನೂಕುನುಗ್ಗಲು ನಡೆಸುತ್ತಿದ್ದಾರೆ. ಕೆಲವರು ನೀರಿನ ಕ್ಯಾನ್ಗಳನ್ನೇ ತೆಗೆದುಕೊಂಡು ಬಂದು ಪೆಟ್ರೋಲ್ ಸಂಗ್ರಹಿಸಲು ಮುಂದಾಗಿರುವುದು ಗಮನಸೆಳೆಯುತ್ತಿದೆ.
ತಮಿಳುನಾಡಿನ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವು ಪೆಟ್ರೋಲ್ ಬಂಕ್ಗಳ ಮುಂದೆ ಜನರ ಗಲಾಟೆಯೂ ನಡೆದಿದೆ.
ಇದರಿಂದ ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಮುಂದಾಗಿದ್ದು, ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸರಬರಾಜು ಸಾಮಾನ್ಯವಾಗಿಯೇ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಈ ವದಂತಿಯನ್ನು ಚುನಾವಣಾ ರಾಜಕೀಯಕ್ಕೆ ಬಳಸುವ ಯತ್ನವೂ ನಡೆಯುತ್ತಿದೆಯೇ ಎಂಬ ಪ್ರಶ್ನೆಯೂ ಇದೀಗ ಎದ್ದಿದೆ.
