
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟಿ-20 ಪಂದ್ಯ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆಯಲಿದೆ. 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಇದಾಗಲೇ 3-1ರಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯ ಭಾರತಕ್ಕೆ ಅಷ್ಟೇನೂ ಮಹತ್ವವಲ್ಲದ ಪಂದ್ಯವಾಗಿದೆ ಆದರೂ ಗೆಲ್ಲುವಿನೊಂದಿಗೆ ಸರಣಿ ಮುಗಿಸುವ ಲೆಕ್ಕಾಚಾರದಲ್ಲಿ ಟೀಂ ಇಂಡಿಯಾವಿದೆ. ಇತ್ತ ಇಂಗ್ಲೆಂಡ್ ತಂಡ ಕೂಡ ಕೊನೆಯ ಪಂದ್ಯದಲ್ಲಾದರೂ ಗೆಲ್ಲುವ ನಿರೀಕ್ಷೆಯಲ್ಲಿ ಕಣಕ್ಕಿಳಿಯಲಿದೆ.

ತವರಿನಲ್ಲಿ 17ನೇ ಬಾರಿಗೆ ಸರಣಿ ಗೆದ್ದ ಭಾರತ
2019ರಿಂದ ಭಾರತ ತಂಡ ತವರಿನಲ್ಲಿ ತನ್ನ ಅಜೇಯ ಓಟವನ್ನ ಮುಂದುವರೆಸಿದೆ. ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ಸರಣಿ ಗೆಲ್ಲುವ ಮೂಲಕ ಟೀ ಇಂಡಿಯಾ ಸತತ 17ನೇ ಸರಣಿಯನ್ನ ಗೆದ್ದುಕೊಂಡಿದೆ . ಆ ಮೂಲಕ ಅಜೇಯ ದಾಖಲೆಯನ್ನು ಭಾರತ ಮುಂದುವರೆಸಿದೆ.
ಭಾರತದ ತಂಡ:
ಸಂಜು ಸ್ಯಾಮ್ಸನ್ ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಧ್ರುವ್ ಜುರೆಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ಶಿವಂ ದುಬೆ, ರಮಣದೀಪ್ ಸಿಂಗ್, ಹರ್ಷಿತ್ ರಾಣಾ.

ಇಂಗ್ಲೆಂಡ್ ತಂಡ:
ಪಿಲ್ ಸಾಲ್ಟ್, ಬೆನ್ ಡಕೆಟ್, ಜೋಸ್ ಬಟ್ಲರ್ ,ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಜೇಮೀ ಸ್ಮಿತ್ ,ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ರೆಹಾನ್ ಅಹ್ಮದ್