
ಅಂಡರ್ 19 ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಎದುರಾಗಿವೆ. ಕರ್ನಾಟಕದ ಆಟಗಾರ್ತಿ ನಿಕಿ ಪ್ರಸಾದ್ ನೇತೃತ್ವದ ಭಾರತ 2ನೇ ವಿಶ್ವಕಪ್ ಜಯದ ನಿರೀಕ್ಷೆಯಲ್ಲಿದೆ. ಈ ಬಾರಿ ಟೂರ್ನಿಯಲ್ಲಿ ಒಂದು ಪಂದ್ಯ ಸೋಲದೇ ಫೈನಲ್ ತಲುಪಿರುವ ಭಾರತ ಪ್ರಶಸ್ತಿ ಗೆಲ್ಲುವ ಫೇವರೆಟ್ ತಂಡವನ್ನಿಸಿಕೊಂಡಿದೆ. ಆರಂಭಿಕ ಬ್ಯಾಟರ್ ಜಿ ತ್ರಿಷಾ (265) ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿರುವ ಆಟಗಾರ್ತಿಯಾಗಿದ್ದಾರೆ.

ಅದೇ ರೀತಿ ಜಿ.ಕಮಲಿನಿ 135 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ನಲ್ಲಿ ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಉತ್ತಮ ಫರ್ಮಾಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡ ಇದೇ ಮೊದಲ ಬಾರಿಗೆ ಫೈನಾಲ್ಗೆ ಬಂದಿದ್ದು ಸೆಮಿಪೈನಲ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ಇದೀಗ ಫೈನಲ್ ಪಂದ್ಯದಲ್ಲಿ ಗೆದ್ದು ಚೊಚ್ಚಲ ಪ್ರಶಸ್ತಿ ಗೆಲ್ಲುವ ಲೆಕ್ಕಾಚಾರದಲ್ಲಿದೆ…
