Ashwaveega News 24×7 ಮಾರ್ಚ್ 22 – 2026 : ವಾಷಿಂಗ್ಟನ್: ವಿಶ್ವದ ಒಟ್ಟು ತೈಲ ಪೂರೈಕೆಯ ಸುಮಾರು ಐದನೇ ಒಂದು ಭಾಗದಷ್ಟು ಸಾಗಾಟ ನಡೆಯುವ ಆಯಕಟ್ಟಿನ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಹಡಗು ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಮುಂದಿನ 48 ಗಂಟೆಗಳೊಳಗೆ ಈ ಜಲಸಂಧಿಯನ್ನು ತೆರೆಯದಿದ್ದರೆ, ಇರಾನ್ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿಸಿಕೊಂಡು ಸಂಪೂರ್ಣವಾಗಿ ನಾಶಪಡಿಸಲಾಗುವುದು ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಜಾಗತಿಕ ಇಂಧನ ಭದ್ರತೆಯ ದೃಷ್ಟಿಯಿಂದ ಹಾರ್ಮುಜ್ ಜಲಸಂಧಿ ಅತ್ಯಂತ ಮಹತ್ವದ್ದಾಗಿದ್ದು, ಇರಾನ್ನ ಈ ಕ್ರಮ ಅಂತರಾಷ್ಟ್ರೀಯ ಮಟ್ಟದಲ್ಲಿ ಆತಂಕವನ್ನು ಉಂಟುಮಾಡಿದೆ.
ಅಮೆರಿಕದ ಈ ತೀವ್ರ ಎಚ್ಚರಿಕೆಯಿಂದಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ಭೀತಿ ಹೆಚ್ಚಾಗಿದ್ದು, ಜಾಗತಿಕ ತೈಲ ಮಾರುಕಟ್ಟೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಮತ್ತೊಮ್ಮೆ, 48 ಗಂಟೆಗಳೊಳಗೆ ಜಲಸಂಧಿಯನ್ನು ತೆರೆಯದಿದ್ದರೆ, ಇರಾನ್ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಪುನರುಚ್ಚರಿಸಿದ್ದಾರೆ.
