ನೆಲಮಂಗಲ : ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ವಿಚಾರವಾಗಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನೂ ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ವಿಳಂಬವಾಗುತ್ತಿದ್ದು, ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ ಎಂಬ ದೂರುಗಳು ಬಂದಿದ್ದವೆ. ಹೀಗಾಗಿ ಇಂದು ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರು ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಅಷ್ಟಪಥ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ್ದು, ಈ ವೇಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಸಂಬಂಧ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಕೇಂದ್ರ ಸಚಿವ ಸೋಮಣ್ಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿ ತಾಕೀತು ಮಾಡಿದ್ದಾರೆ.