ಕಿರುತೆರೆ ನಟಿ, ನಾಗಿಣಿ ಖ್ಯಾತಿಯ ದೀಪಿಕಾ ದಾಸ್ ಸೀರಿಯಲ್ ಮೂಲಕ ಎಲ್ಲರಿಗೂ ಪರಿಚಿತರು. ಕನ್ನಡ ಬಿಗ್ಬಾಸ್ನ ಮಾಜಿ ಸ್ಪರ್ಧಿ ಕೂಡ. ಸದ್ಯ ಇವರು ಮದುವೆಯಾಗಿ ಪತಿ ಜೊತೆ ಇದ್ದಾರೆ. ಆದರೆ ಬೆಂಗಳೂರಿನಲ್ಲಿರುವ ಇವರ ತಾಯಿ ಪದ್ಮಲತಾಗೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.
ಮಾದನಾಯಕನಹಳ್ಳಿಯಲ್ಲಿ ಇರುವ ದೀಪಿಕಾ ದಾಸ್ ನಿವಾಸಕ್ಕೆ ಕಿಡಿಗೇಡಿಗಳು ಮಧ್ಯರಾತ್ರಿ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಜೊತೆಗೆ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.