ಚಿಕ್ಕಬಳ್ಳಾಪುರ : ಯೋಗ ಶಿಕ್ಷಕಿಯನ್ನ ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬ ಆರೋಪಿಗಳನ್ನ ದಿಬ್ಬೂರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೂ ಸತೀಶ್ರೆಡ್ಡಿ ಬಳಿ ಅರ್ಚನಳ ಯೋಗ ಕಲಿಯುವುದಕ್ಕೆ ಬರುತ್ತಿದ್ದು, ನಂತರ ಗನ್ ತರಬೇತಿ ನೀಡುವುದಾಗಿ ಸತೀಶ್ರೆಡ್ಡಿ ಗ್ಯಾಂಗ್ ಅರ್ಚನಳನ್ನ ಅ.23ರಂದು ಡಿಎಸ್ ಮ್ಯಾಕ್ಸ್ ಸನ್ವರ್ತ್ ಅಪಾರ್ಟ್ಮೆಂಟ್ನಿಂದ ಕಿಡ್ನ್ಯಾಪ್ ಮಾಡಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಶಿಕ್ಷಕಿ ಸತ್ತು ಹೋಗಿದ್ದಾಳೆಂದು ಭಾವಿಸಿ ಗುಂಡಿ ತೋಡಿ ಆಕೆಯ ಮೇಲೆ ಮರದ ಕೊಂಬೆಗಳನ್ನು ಹಾಕಿ ಹೋಗಿದ್ದಾರೆ.
ಇನ್ನೂ ಯೋಗ ಶಿಕ್ಷಕಿ ಸತ್ತಂತೆ ನಟಿಸಿದ್ದು, ದುಷ್ಕರ್ಮಿಗಳು ಹೋದ ಬಳಿಕ ಗುಂಡಿಯಿಂದ ಎದ್ದು ಹೊರಬಂದಿದ್ದಾರೆ. ಅಲ್ಲದೆ ಅರ್ಚನ ಕೊಲೆಗೆ ಆಕೆಯ ಪ್ರಿಯಕರ ಸಂತೋಷ್ ಕುಮಾರ್ ಪತ್ನಿ ಸುಪಾರಿ ನೀಡಿದ್ದ ಆರೋಪ ಕೇಳಿಬಂದಿದೆ.