
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ ಭಾರತದ ಸ್ಪಿನ್ನರ್ ವರುಣ್ ಚಕ್ರವರ್ತಿ ಏಕದಿನ ಶ್ರೇಯಾಂಕದಲ್ಲಿ 143 ಬೌಲರ್ಗಳನ್ನು ಹಿಂದಿಕಿದ್ದಾರೆ. ಆ ಮೂಲಕ ಆಗ್ರ 100ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆಡಿದ ಎರಡೇ ಪಂದ್ಯಗಳಿಂದ 7 ವಿಕೆಟ್ ಪಡೆದುಕೊಂಡಿರಯವ ವರುಣ್ ಅತಿ ಹೆಚ್ಚು ವಿಕೆಟ್ ಪಡೆದಕೊಂಡವರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನಮೂದಿಸಿಕೊಂಡಿದ್ದಾರೆ. ಮಿಸ್ಟ್ರಿ ಸ್ಪಿನ್ನರ್ ಎಂದೇ ಖ್ಯಾತಿಯನ್ನು ಪಡೆದಿರುವ ವರುಣ್ ಚಕ್ರವರ್ತಿ ಸಿಕ್ಕ ಅವಕಾಶವನ್ನು ಎರಡು ಕೈಗಳಲ್ಲಿ ಬಾಚಿಕೊಂಡಿದ್ದಾರೆ. ಸದ್ಯ ಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶ್ರೀಲಂಕಾದ ಮಹೀಶ್ ತೀಕ್ಷಣ ಮೊದಲ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕೇಶವ್ ಮಹರಾಜ್, ನ್ಯೂಜಿಲೆಂಡ್ನ ಮ್ಯಾಟ್ ಹೆನ್ರಿ ಮೂರನೇ ಸ್ಥಾನದಲ್ಲಿದ್ದಾರೆ. ಆಗ್ರ 10ರಲ್ಲಿ ಭಾರತದ ಮತ್ತೊಬ್ಬ ಸ್ಪಿನ್ನರ್ ಕುಲ್ದಿಫ್ ಯಾದವ್ ಮೂರು ಸ್ಥಾನ ಕುಸಿತ ಕಂಡು 6ನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ 13, ಮೊಹಮ್ಮದ್ ಶಮಿ 11ನೇ ಸ್ಥಾನದಲ್ಲಿದ್ದಾರೆ..

ಅಭಿಷೇಕ್.ಎಸ್