Ashwaveega News 24×7 ಅಕ್ಟೋಬರ್. 10: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ಸ್ನಾನದ ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.
ಜೆ.ಪಿ ನಗರದ ನಿವಾಸದಲ್ಲಿ ಅವರು ಜಾರಿ ಬಿದ್ದಿದ್ದಾರೆ. ಅದರ ಪರಿಣಾಮವಾಗಿ ಉಮೇಶ್ ಅವರ ಸೊಂಟ ಹಾಗೂ ಭುಜದ ಭಾಗಕ್ಕೆ ಪೆಟ್ಟಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಸದ್ಯಕ್ಕೆ ಶಾಂತ ಹಾಸ್ಪಿಟಲ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಸ್ತ್ರ ಚಿಕಿತ್ಸೆಯ ಅವಶ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
80 ವರ್ಷಗಳ ಹಿರಿಯ ನಟ ಎಂ.ಎಸ್ ಉಮೇಶ್ ಅವರು ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ತಮ್ಮ ಅದ್ವಿತೀಯ ಶೈಲಿಯಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ತಮ್ಮ ಪಾತ್ರಕ್ಕಾಗಿ ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
