ಬೆಂಗಳೂರು : ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ಡಿ ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದ್ದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್ಡಿ ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಭಾಗಿಯಾಗಿದ್ದು, ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ.