ಉಡುಪಿ : ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿಯಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ರು. ಉಡುಪಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ನಕ್ಸಲೈಟಗಳನ್ನ ಬೇರು ಸಮೇತ ಕಿತ್ತು ಹಾಕಬೇಕು.
ಇದು ಸರ್ಕಾರ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ರು.