Ashwaveega News 24×7 ಏಪ್ರಿಲ್ 9 – 2026 : ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಇಂದು ಅಂತಿಮ ತೀರ್ಪು ಹೊರಬೀಳಲಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ನತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ .
ಪ್ರಕರಣದ ವಿಚಾರಣೆ ಏಪ್ರಿಲ್ 2ರಂದು ಪೂರ್ಣಗೊಂಡಿದ್ದು, ತೀರ್ಪನ್ನು ಕೋರ್ಟ್ ಕಾಯ್ದಿರಿಸಿತ್ತು. ಇದೀಗ ಇಂದು ಆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಉದ್ವಿಗ್ನತೆ ನಿರ್ಮಾಣವಾಗಿದೆ .
ಈ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ A-15 ಆರೋಪಿಯಾಗಿ ಗುರುತಿಸಲ್ಪಟ್ಟಿದ್ದು, ತೀರ್ಪು ಅವರಿಗೆ ರಿಲೀಫ್ ನೀಡುತ್ತದೆಯೇ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಇತ್ತೀಚೆಗಷ್ಟೇ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕುಲಕರ್ಣಿ, ಇದೀಗ ನ್ಯಾಯಾಲಯದ ತೀರ್ಪಿನ ನಿರೀಕ್ಷೆಯಲ್ಲಿ ಇದ್ದಾರೆ. ಅವರ ಬೆಂಬಲಿಗರು ಮತ್ತು ವಿರೋಧಿಗಳು ಇಬ್ಬರೂ ಕೂಡ ತೀರ್ಪಿನತ್ತ ಕಣ್ಣಿಟ್ಟಿದ್ದು, ಫಲಿತಾಂಶ ಯಾವ ದಿಕ್ಕಿನಲ್ಲಿ ಹೊರಬೀಳಲಿದೆ ಎಂಬುದರ ಬಗ್ಗೆ ಉತ್ಕಂಠೆ ಹೆಚ್ಚಾಗಿದೆ.
ಒಟ್ಟಾರೆ, ಈ ಹೈಪ್ರೊಫೈಲ್ ಪ್ರಕರಣದ ತೀರ್ಪು ರಾಜ್ಯ ರಾಜಕೀಯದ ಮೇಲೆ ಮಹತ್ತರ ಪರಿಣಾಮ ಬೀರುವ ಸಾಧ್ಯತೆ ಇದೆ .
