Ashwaveega News 24×7 ನವೆಂಬರ್. 30: ಟೀಂ ಇಂಡಿಯಾದ ಖ್ಯಾತ ಬ್ಯಾಟರ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 52ನೇ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.
ಆರಂಭದಿಂದಲೂ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ಕೇವಲ 48 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು 2 ಸಿಕ್ಸರ್ಗಳೊಂದಿಗೆ ಅರ್ಧಶತಕ ಪೂರೈಸಿದರು.
ಆದರೆ ರೋಹಿತ್ ಶರ್ಮಾ ವಿಕೆಟ್ ಬಳಿಕ ತಾಳ್ಮೆಯ ಆಟಕ್ಕೆ ಮುಂದಾದ ಕೊಹ್ಲಿ 102 ಎಸೆತಗಳಲ್ಲಿ ಶತಕದ ಗಡಿ ದಾಟಿದರು. ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದ ಕೊಹ್ಲಿ, 102 ಎಸೆತಗಳಲ್ಲಿ 5 ಸಿಕ್ಸ್, 7 ಫೋರ್ಗಳೊಂದಿಗೆ ಅಬ್ಬರದ ಶತಕ ಬಾರಿಸಿದ್ದಾರೆ.
ವಿರಾಟ್ ಕೊಹ್ಲಿ ತಮ್ಮ ಅಸಾಂಪ್ರದಾಯಿಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ.
ಇತ್ತ ಹಿಟ್ಮ್ಯಾನ್ ರೋಹಿತ್ ಶರ್ಮಾ ಸಹ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಆಕರ್ಷಕ ಅರ್ಧಶತಕ ಸಿಡಿಸಿದ ರೋಹಿತ್ ಮೂರು ಸಿಕ್ಸರ್ ಸಿಡಿಸಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂಬರ್1 ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಕೊಹ್ಲಿ 2023ರಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಕ್ರಿಕೆಟಿಗರಾದರು. ಸಚಿನ್ ಏಕದಿನ ಪಂದ್ಯಗಳಲ್ಲಿ 49 ಶತಕಗಳನ್ನು ಗಳಿಸಿದ್ದಾರೆ.
37 ವರ್ಷದ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. ಅವರು ಈಗ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತೀಯ ಆಟಗಾರರಾಗಿದ್ದಾರೆ.
