ದಾವಣಗೆರೆ : ಮಳೆಗೆ ಗೋಡೆ ಕುಸಿದಿದ್ದು, ಐದು ವರ್ಷದ ಬಾಲಕಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ. ಇನ್ನೂ ಕಳೆದೆರಡು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ, ಮಳೆಯಿಂದ ನೂರಾರು ಮನೆಗಳು ಮತ್ತು ರಸ್ತೆಗಳು ಜಲಾವೃತ ಆಗಿದ್ದು, ಜನ ಜೀವನ ಅಸ್ತವ್ಯಸ್ತ ಆಗಿದೆ.
ದಾವಣಗೆರೆಯ ಹರಿಹರ ಪಟ್ಟಣದ ಭೀಮ್ ನಗರದಲ್ಲಿ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ, ಐದು ವರ್ಷದ ಬಾಲಕಿ ಆಯೇಷಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಬಾಲಕಿ ಆಯೇಷಾಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಇದೆ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ, ಮಗು ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ. ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ಸೂಚನೆ ಮಾಡಿದ್ದು, ಬಾಲಕಿ ಆಯೇಷಾ ಕುಟುಂಬದವರಿಗೆ ಧೈರ್ಯ ತುಂಬಿ ಬಾಲಕಿಗೆ ಉತ್ತಮ ಚಿಕಿತ್ಸೆ ಕೊಡುವುದ್ದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : https://ashwaveega.com/the-risk-of-consuming-too-much-almonds-is-guaranteed/