
ಬೆಂಗಳೂರು : ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದ್ದು, DCM ಡಿಕೆಶಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.