Ashwaveega News 24×7 ಏಪ್ರಿಲ್ 3 – 2026 : ಬಾಗಲಕೋಟೆ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶಾಸಕ ಯತ್ನಾಳ್ ಭರ್ಜರಿ ಪ್ರಚಾರ ನಡೆಸಿದರು.
ರಾಂಪೂರ ಗ್ರಾಮ ಸೇರಿದಂತೆ ವಿವಿಧ ಕಡೆಗಳಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಮತದಾರರನ್ನು ಭೇಟಿ ಮಾಡಿದ ಯತ್ನಾಳ್, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. “ ಹಿಂದೂ ಧರ್ಮ ಉಳಿಯಬೇಕಾದರೆ ಬಿಜೆಪಿ ಗೆಲ್ಲಬೇಕು” ಎಂದು ಅವರು ಹೇಳಿದರು .
ಪ್ರಚಾರದ ವೇಳೆ ಮಾತನಾಡಿದ ಯತ್ನಾಳ್, “ಯಾವುದೇ ರೀತಿಯ ಗಲಾಟೆ ನಡೆದರೆ ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಮುಖ್ಯ” ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ಪರ ವಾತಾವರಣ ನಿರ್ಮಾಣ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದರು.
ಯತ್ನಾಳ್ ಜೊತೆಗೆ ಸಂಸದ ಪ್ರತಾಪ್ ಸಿಂಹ ಕೂಡ ಪ್ರಚಾರದಲ್ಲಿ ಭಾಗವಹಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಸಾಧನೆಗಳನ್ನು ಜನರಿಗೆ ವಿವರಿಸಿದರು. ಇಬ್ಬರೂ ನಾಯಕರು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳಿದರು.
ವೀರಣ್ಣ ಚರಂತಿಮಠ ಅವರ ವ್ಯಕ್ತಿತ್ವವನ್ನು ಉಲ್ಲೇಖಿಸಿದ ಯತ್ನಾಳ್, “ಅವರು ನೇರ ಸ್ವಭಾವದವರು, ಆದರೆ ಜನಪರ ನಾಯಕರು” ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ “ಹಿಂದೂ ಹುಲಿ” ಎಂಬ ಘೋಷಣೆಗಳೊಂದಿಗೆ ನಡೆದ ಈ ಪ್ರಚಾರ ಅಭಿಯಾನ ಗಮನ ಸೆಳೆದಿದ್ದು, ಸ್ಥಳೀಯ ರಾಜಕೀಯದಲ್ಲಿ ಚರ್ಚೆ ಆಗ್ತಾಯಿದೆ …
