Ashwaveega News 24×7 ಮಾರ್ಚ್ 25 – 2026 ಚಿಕ್ಕಮಂಗಳೂರು : ನಾಗಾಲ್ಯಾಮಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಂಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟೊಂದರಲ್ಲಿ ಕೆಲಸ ಮಾಡಿತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿಮಿನಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟಿದ್ದಾಳೆ.
ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿತಾ ಇಂಚುಗರ್ ಎಂಬುವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
