
EKKA GRAND RELEASE
Ashwaveega News 24×7 ಜು.18: ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಎರಡನೇ ಸಿನಿಮಾ ಇಂದು ಬಹಳ ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿದೆ. ‘ಎಕ್ಕ’ ಈ ಸಾಲಿನ ಭರ್ಜರಿ ಚಿತ್ರವಾಗಿ ಗುರುತಿಸಿಕೊಂಡಿತ್ತು. ಪ್ರಚಾರ ಕೂಡ ಬಹಳ ದೊಡ್ಡ ಮಟ್ಟದಲ್ಲೇ ನಡೆದಿತ್ತು. ಸಿನಿಮಾಗೂ ಮುನ್ನ ಬಿಡುಗಡೆಯಾದ ಪ್ರಮೋಶನಲ್ ಕಂಟೆಂಟ್ಗಳು ನೆಟ್ಟಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.
ಕೊನೆಗೂ, ಸಿನಿಮಾ ಇಂದು ಥಿಯೇಟರ್ಗಳಿಗೆ ಗ್ರ್ಯಾಂಡ್ ಎಂಟ್ರಿ ಪಡೆದುಕೊಂಡಿದೆ.
ಅಶ್ವಿನಿ ಪುನೀತ್ ರಾಜ್ಕುಮಾರ್, ಜಯಣ್ಣ, ಭೋಗೇಂದ್ರ, ಯೋಗಿ ಜಿ. ರಾಜ್, ಕಾರ್ತಿಕ್ ಗೌಡ ಜಂಟಿಯಾಗಿ ನಿರ್ಮಿಸಿರುವ ಸಿನಿಮಾಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಯುವ ರಾಜ್ಕುಮಾರ್ ಬಹಳ ರಗಡ್ ನೋಟದಲ್ಲಿ ಕಾಣಿಸಿಕೊಂಡಿದ್ದರೆ, ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಯುವ ಅವರಿಗೆ ಸಾಥ್ ಕೊಟ್ಟಿದ್ದಾರೆ.
ದೊಡ್ಮನೆ ಕುಡಿ ಯುವ ಅಭಿನಯದ ಬಹುನಿರೀಕ್ಷೆಯ ಚಿತ್ರ ಇಂದು ರಾಜ್ಯದ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯದ ಹಲವು ಚಿತ್ರಮಂದಿರಗಳೆದುರು ದೊಡ್ಮನೆ ಅಭಿಮಾನಿಗಳು ಸಂಭ್ರಮಾಚರಿಸಿ, ಬಹಳ ಅದ್ಧೂರಿಯಾಗಿ ತಮ್ಮ ಮೆಚ್ಚಿನ ನಟನ ಚಿತ್ರವನ್ನು ಬರಮಾಡಿಕೊಂಡಿದ್ದಾರೆ.
ಜೊತೆಗೆ, ಈ ಸಿನಿಮಾ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ರೋಹಿತ್ ಪದಕಿ ನಿರ್ದೇಶನದ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್, ಜಯಣ್ಣ, ಭೋಗೇಂದ್ರ, ಯೋಗಿ ಜಿ.ರಾಜ್, ಕಾರ್ತಿಕ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ.
ಚರಣ್ ರಾಜ್ ಸಂಗೀತ, ಸತ್ಯಾ ಹೆಗಡೆ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ. ಮಾಸ್ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿರುವ ಚಿತ್ರ ಇಂದು ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.