Ashwaveega News 24×7 ಫೆಬ್ರವರಿ 18 -2026 : ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೇಡಿಕೆ ಇದೀಗ ಗಮನ ಸೆಳೆಯುತ್ತಿದೆ . ರೈತ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಮಹತ್ವದ ಬೇಡಿಕೆಗಳನ್ನು ಮುಂದಿಟ್ಟಿವೆ.
ಗ್ರಾಮೀಣ ಭಾಗದಲ್ಲಿ ರೈತ ಯುವಕರಿಗೆ ಮದುವೆಗೆ ಹೆಣ್ಣು ಸಿಗದ ಪರಿಸ್ಥಿತಿ ಉಂಟಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ. ಈ ಹಿನ್ನೆಲೆ ರೈತನನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ₹10 ಲಕ್ಷ ಠೇವಣಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ ಸರ್ಕಾರಿ ಉದ್ಯೋಗಗಳಲ್ಲಿ 20% ಮೀಸಲಾತಿ ನೀಡುವಂತೆ ಮನವಿ ಸಲ್ಲಿಸಲಾಗಿದೆ.
“ರೈತನ ಮದುವೆಯಾಗೋ ಹೆಣ್ಮಕ್ಕಳಿಗೆ ಜಾಕ್ಪಾಟ್ ಸಿಗಬೇಕು. ರೈತರ ಬದುಕಿಗೆ ಗೌರವ ಸಿಗಬೇಕು,” ಎಂದು ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ. ಇದೇ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ₹50 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಯೂ ಮುಂದಿಟ್ಟಿದ್ದಾರೆ. ರೈತ ಕುಟುಂಬಗಳ ಸುರಕ್ಷತೆಗೆ ಸಮಗ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಇದಲ್ಲದೆ, ರಾಜ್ಯಾದ್ಯಂತ ಟೋಲ್ ಸಂಗ್ರಹಣೆ ರದ್ದುಗೊಳಿಸಲು “ಪಂಜಾಬ್ ಮಾದರಿ” ಅನುಸರಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಟೋಲ್ ಭಾರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ವಾದಿಸಿದ್ದಾರೆ.
ಹೌದು ಈ ಎಲ್ಲಾ ಬೇಡಿಕೆಗಳ ಕುರಿತು ಸರ್ಕಾರ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ .. ಬರುವ ಬಜೆಟ್ನಲ್ಲಿ ಈ ಘೋಷಣೆಗಳು ನಿಜ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
